ಅರಣ್ಯಕಾಂಡ 30:10

ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 30

8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.

9ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.

10ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ

11ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.

12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.

ಅರಣ್ಯಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी