ಮಲಾಕಿಯ 2:2

ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

1ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ.

2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.

3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.

4ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी