ಮತ್ತಾಯನು 13:25

ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 13

23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.

24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.

25ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.

26ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.

27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.

ಮತ್ತಾಯನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी