೧ ಪೂರ್ವಕಾಲವೃತ್ತಾಂತ 26:12

ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 26

10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

11ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.

12ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

13ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.

14ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.

೧ ಪೂರ್ವಕಾಲವೃತ್ತಾಂತ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी