ಮತ್ತಾಯನು 3:7

ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಸಂದರ್ಭದೊಂದಿಗೆ ಓದಿ · ಮತ್ತಾಯನು 3

5ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.

6ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.

7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी