ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಸಂದರ್ಭದೊಂದಿಗೆ ಓದಿ · ಜೆಕರ್ಯ 7

9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.

11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.

13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी