೧ ಅರಸುಗಳು 2:7

ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.

7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.

8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.

9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी