೧ ಕೊರಿಂಥದವರಿಗೆ 4:8

ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 4

6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.

7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?

8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.

9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

೧ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी