ಯೆಶಾಯ 65:5

ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 65

3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;

4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--

5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.

6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.

7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.

ಯೆಶಾಯ 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी