ವಿಮೋಚನಕಾಂಡ 15:10

ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

8ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.

9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.

11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?

12ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी