ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ