ವಿಮೋಚನಕಾಂಡ 3:10

ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

9ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.

10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.

12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी