ವಿಮೋಚನಕಾಂಡ 7:22

ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 7

20ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.

22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

23ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.

24ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.

ವಿಮೋಚನಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी