೧ ಅರಸುಗಳು 10:8

ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.

7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.

8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.

9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी