ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ