ಯೆರೆಮಿಯ 16:9

ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 16

7ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.

8ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.

9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.

10ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.

11ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.

ಯೆರೆಮಿಯ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी