ನೆಹೆಮಿಯ 3:15

ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.

14ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.

15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.

16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.

17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी