ಎಫೆಸದವರಿಗೆ 6:11

ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 6

9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.

10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.

12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.

13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.

ಎಫೆಸದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी