ಯೆರೆಮಿಯ 2:6

ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

4ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.

5ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?

6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.

7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.

8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी