೨ ಸಮುವೇಲನು 21:10

ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು

9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.

11ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.

12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी