ಯೋಹಾನನು 8:29

ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

27ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.

28ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.

29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.

30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी