೧ ಅರಸುಗಳು 12:16

ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

14ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.

16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.

17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್‌ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.

18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी