ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
43ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ