ಯೆಹೆಜ್ಕೇಲನು 19:7

ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 19

5ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.

6ಅದು ಸಿಂಹಗಳ ಮಧ್ಯೆ ತಿರುಗಾಡಿ ಪ್ರಾಯದ ಸಿಂಹವಾಗಿ ಕೊಳ್ಳೆ ಹೊಡೆ ಯುವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

7ಅವರ ಅರಮನೆಗಳನ್ನು ಹಾಳು ಮಾಡಿತು; ಅವರ ನಗರಗಳನ್ನೂ ನಾಶಮಾಡಿತು. ಅದರ ಗರ್ಜನೆಯ ಶಬ್ದದಿಂದಾಗಿ ದೇಶವೂ ಅದರ ಪರಿಪೂರ್ಣತೆಯೂ ಬೀಡಾಗಿದ್ದನ್ನು ಅದು ತಿಳಿದುಕೊಂಡಿತು.

8ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.

9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.

ಯೆಹೆಜ್ಕೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी