ಯೆಶಾಯ 51:10

ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?

ಸಂದರ್ಭದೊಂದಿಗೆ ಓದಿ · ಯೆಶಾಯ 51

8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.

9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?

11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.

12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಯೆಶಾಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी