ಯೆಹೆಜ್ಕೇಲನು 1:3

ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್‌ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 1

1ನಾನು ಸೆರೆಯವರ ಜೊತೆ ಕೆಬಾರ್‌ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.

2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ

3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್‌ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.

4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.

5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.

ಯೆಹೆಜ್ಕೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी