ಮಲಾಕಿಯ 1:8

ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?

ಸಂದರ್ಭದೊಂದಿಗೆ ಓದಿ · ಮಲಾಕಿಯ 1

6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.

8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?

9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?

10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.

ಮಲಾಕಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी