೨ ಕೊರಿಂಥದವರಿಗೆ 1:15

ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 1

13ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.

14ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.

15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ

16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.

17ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?

೨ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी