ದಾನಿಯೇಲನು 2:7

ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

7ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.

8ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.

9ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी