ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
33ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
36ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ