ಹೋಶೇ 10:4

ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

ಸಂದರ್ಭದೊಂದಿಗೆ ಓದಿ · ಹೋಶೇ 10

2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.

3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.

4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.

5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.

6ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್‌ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.

ಹೋಶೇ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी