ಆದಿಕಾಂಡ 13:8

ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 13

6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.

7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.

8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.

10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

ಆದಿಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी