ಯೆಹೆಜ್ಕೇಲನು 32:31

ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

29ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.

30ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.

31ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.

32ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी