೧ ಸಮುವೇಲನು 1:13

ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.

12ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.

13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.

14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.

15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी