ದಾನಿಯೇಲನು 6:13

ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 6

11ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು.

12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.

13ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.

14ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.

15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.

ದಾನಿಯೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी