೧ ಅರಸುಗಳು 2:27

ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.

26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.

27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

29ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी