ಯೆಹೆಜ್ಕೇಲನು 8:8

ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 8

6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.

7ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು

8ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.

9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.

10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.

ಯೆಹೆಜ್ಕೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी