ಯೆಹೆಜ್ಕೇಲನು 43:3

ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್‌ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 43

1ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;

2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.

3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್‌ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.

4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.

5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.

ಯೆಹೆಜ್ಕೇಲನು 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी