ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
29ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.
33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ