ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
4ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
5ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
6ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
7ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ