ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ