ಆದಿಕಾಂಡ 18:4

ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 18

2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.

4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.

5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.

6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.

ಆದಿಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी