ವಿಮೋಚನಕಾಂಡ 12:25

ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.

24ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.

25ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.

26ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ

27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी