ಅರಣ್ಯಕಾಂಡ 30:6

ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 30

4ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.

5ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.

6ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆ

7ಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು.

8ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.

ಅರಣ್ಯಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी