ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
3ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
5ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ