೨ ಸಮುವೇಲನು 5:3

ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 5

1ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.

3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

4ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

೨ ಸಮುವೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी