ಯೆಹೆಜ್ಕೇಲನು 13:22

ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 13

20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.

21ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी