ಯೆಹೆಜ್ಕೇಲನು 30:16

ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 30

14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.

15ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.

16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.

17ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,

18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.

ಯೆಹೆಜ್ಕೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी