ಮತ್ತಾಯನು 23:15

ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

14ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

15ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

16ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी