ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
21ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
22ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ